ದೇಶಪ್ರಮುಖ ಸುದ್ದಿ

ದೇಶದಲ್ಲಿ 41,806 ಮಂದಿಗೆ ಕೊರೊನಾ ಸೋಂಕು: 581 ಸಾವು

ನವದೆಹಲಿ,ಜು.15-ದೇಶದಲ್ಲಿ ನಿನ್ನೆ 41,806 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, 581 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಇದರಿಂದ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,09,87,880ಕ್ಕೆ ತಲುಪಿದ್ದು, ಸಾವಿನ 4,11,989ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,32,041ಕ್ಕೆ ಕುಸಿದಿದೆ. ನಿನ್ನೆ 39,130 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,01,43,850ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,43,488 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 43,80,11,958 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  39,13,40,491 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: