ಕರ್ನಾಟಕಪ್ರಮುಖ ಸುದ್ದಿ

ಕೆ.ಆರ್.ಎಸ್ ಹಿನ್ನೀರಿನಲ್ಲಿ ಪ್ರವಾಸೋದ್ಯಮ ಸಚಿವರಿಂದ ಬೋಟಿಂಗ್ ಗೆ ಚಾಲನೆ

ರಾಜ್ಯ( ಮಂಡ್ಯ).ಜು.16:- ಪ್ರವಾಸೋದ್ಯಮಕ್ಕೆ ಒತ್ತು ನೀಡುವ ದೃಷ್ಟಿಯಿಂದ ಇಂದು ಕೆ.ಆರ್.ಎಸ್ ಹಿನ್ನೀರಿನಲ್ಲಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ ಯೋಗೇಶ್ವರ್ ರವರು ಬೋಟಿಂಗ್ ಗೆ ಚಾಲನೆ ನೀಡಿದರು.
ಬೋಟಿಂಗ್ ಗೆ ಚಾಲನೆ ನೀಡುವ ಮುನ್ನ ಕೆ.ಆರ್ , ಎಸ್ ಹಿನ್ನೀರಿನಲ್ಲಿರುವ ವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀವೇಣುಗೋಪಾಲಸ್ವಾಮಿಯ ದರ್ಶನ ಪಡೆದರು.
ಸಚಿವರೊಟ್ಟಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಸಿ ನಾರಾಯಣಗೌಡ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆಯಾದ ಚಿತ್ರನಟಿ ಶ್ರುತಿ ಕೂಡ ಕೆ.ಆರ್.ಎಸ್ ಹಿನ್ನೀರಿನಲ್ಲಿನ ನಡುಗಡ್ಡೆ (ದ್ವೀಪ)ಯ ಪರಿವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಶ್ವತಿ, ಜಿ.ಪಂ ಸಿಇಒ ದಿವ್ಯಾಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ , ಪಾಂಡವಪುರ ಉಪವಿಭಾಗಾಧಿಕಾರಿ ಶಿವನಂದಾಮೂರ್ತಿ ಹಾಗೂ ಮತ್ತಿತರರು ಭಾಗಿಯಾಗಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: