ಕರ್ನಾಟಕಪ್ರಮುಖ ಸುದ್ದಿ

ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಗೆ ಪಿತೃ ವಿಯೋಗ

ರಾಜ್ಯ( ವಿಜಯನಗರ)ಜು.19:- ಮೂಲಸೌಕರ್ಯಾಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ನಿಧನರಾಗಿದ್ದಾರೆ.

ಅವರಿಗೆ 87ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನಲೆಯಲ್ಲಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೂಲಸೌಕರ್ಯಾಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ, ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Leave a Reply

comments

Related Articles

error: