ದೇಶಪ್ರಮುಖ ಸುದ್ದಿ

ಉತ್ತರಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಮೇಘಸ್ಫೋಟ : ಮೂವರ ಸಾವು

ದೇಶ(ಉತ್ತರಕಾಶಿ)ಜು.19:-  ಉತ್ತರಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಇಂದು  ಮುಂಜಾನೆ ಮೇಘಸ್ಫೋಟದ ನಂತರ ಒಂದೇ ಕುಟುಂಬದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಇಬ್ಬರು ಮಹಿಳೆಯರಾದ ಮಾಧುರಿ (42) ಮತ್ತು ಋತು(38) ಎಂದು   ಆರು ವರ್ಷದ ಮಗು ಈಶು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉತ್ತರಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಮೇಘಸ್ಫೋಟದಿಂದ ಮೂವರು ಮೃತಪಟ್ಟಿದ್ದಾರೆ ಮತ್ತು ನಾಲ್ಕು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ  ಎಂದು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ತಂಡದ ಉಸ್ತುವಾರಿ ಇನ್ಸ್ಪೆಕ್ಟರ್ ಜಗದಂಬಾ ಪ್ರಸಾದ್ ತಿಳಿಸಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯ ನಡುವೆ ಮೇಘಸ್ಫೋಟದ ನಂತರ ಮಾಂಡೋ ಗ್ರಾಮದ ಕೆಲವು ಪ್ರದೇಶಗಳಲ್ಲಿ ಹಲವಾರು ಮನೆಗಳು ನೀರಿನಿಂದ ಮುಳುಗಿವೆ ಎಂದು ಎಸ್‌ಡಿಆರ್‌ಎಫ್ ತಿಳಿಸಿದೆ. ಗಂಗೋತ್ರಿ ರಸ್ತೆಯ ಮಾಂಡೋ ಗ್ರಾಮದ ಚರಂಡಿಯಿಂದ ನೀರು ಬರುತ್ತಿರುವುದರಿಂದ ಗ್ರಾಮದಲ್ಲಿ ಕೆಲವರು ಸಿಕ್ಕಿಬಿದ್ದಿದ್ದಾರೆ ಎಂದು ಉತ್ತರ ಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ತಿಳಿಸಿದ್ದು, ಮಾಹಿತಿಯ ಮೇರೆಗೆ ತಂಡವು ತಕ್ಷಣ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: