ಮೈಸೂರು

ಅನ್ನ, ಆರೋಗ್ಯ, ಆಧ್ಯಾತ್ಮದಲ್ಲಿ ಬಾಲಗಂಗಾಧರ ನಾಥ ಶ್ರೀ ಗಳು ಅದ್ಭುತ ಪವಾಡವನ್ನೇ ಮಾಡಿದ್ದಾರೆ : ಹೇಮಂತ್ ಕುಮಾರ್ ಗೌಡ ಬಣ್ಣನೆ

ಮೈಸೂರು, ಜು.20:-   ಅನ್ನ, ಅಕ್ಷರ, ಆರೋಗ್ಯ, ಆಧ್ಯಾತ್ಮ, ಅರಣ್ಯ ಹಾಗೂ ಗೋಶಾಲೆ ಮೂಲಕ ಶ್ರೀಕ್ಷೇತ್ರದ ಪೀಠಾಧ್ಯಕ್ಷರಾಗಿದ್ದ  ಬಾಲಗಂಗಾಧರನಾಥಸ್ವಾಮೀಜಿಗಳು ಅದ್ಭುತವಾದ ಪವಾಡವನ್ನೇ ಮಾಡಿದ್ದಾರೆ ಎಂದು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ಬಣ್ಣಿಸಿದರು.

ನಿರ್ಮಲಾನಂದ ಸ್ವಾಮೀಜಿ ಜನ್ಮದಿನ ಪ್ರಯುಕ್ತ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ 30 ಯೂನಿಟ್ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ನಿರ್ಮಲಾನಂದ ಸ್ವಾಮೀಜಿ ಜನ್ಮದಿನ ವನ್ನು ಒಕ್ಕಲಿಗರ ಯುವ ಶಕ್ತಿ ವೇದಿಕೆ ಅರ್ಥಪೂರ್ಣವಾಗಿ ಆಚರಿಸಿದ್ದು,ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ವಿಜ್ಞಾನದ ವಿದ್ಯಾರ್ಥಿಯಾದ ನಿರ್ಮಲಾನಂದ ಶ್ರೀಗಳು ಸಂಸ್ಕೃತದಲ್ಲೂ ಉನ್ನತ ವಿದ್ಯಾಭ್ಯಾಸ ಮಾಡಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದ 72 ಪೀಠಾಧಿಪತಿಯಾಗಿ ಮಠವನ್ನು ಹಂತಹಂತವಾಗಿ ಕಟ್ಟಿ ಶೈಕ್ಷಣಿಕವಾಗಿ ಧಾರ್ಮಿಕವಾಗಿ ಸಾಮಾಜಿಕವಾಗಿ ಸೇವಾ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದಿಂದ ತಂದೆ-ತಾಯಿ ಕಳೆದುಕೊಂಡಿರುವ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ಶ್ರೀಗಳ ನೇತೃತ್ವದಲ್ಲಿ ವಹಿಸಿಕೊಂಡಿದ್ದು ಅನಾಥವಾಗಿರುವ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ಮಾನವೀಯತೆ ಮೆರೆದಿದ್ದಾರೆ. ಹಾಗೆಯೇ ಸಂಕಷ್ಟ ಸಂದರ್ಭದಲ್ಲಿ ಜಾತಿ ಮತ ನೋಡದೆ ಸರ್ವರಿಗೂ ಸಹಾಯ ಮಾಡಿದ್ದಾರೆ ಎಂದರು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ರಾದ ನಾರಾಯಣ್ ಗೌಡ ಮಾತನಾಡಿ ರಕ್ತಕ್ಕೆ ಪರ್ಯಾಯ ಇಲ್ಲ. ಆದ್ದರಿಂದ ಸಾವಿನ ಅಂಚಿನಲ್ಲಿರುವವರ ಜೀವ ಉಳಿಸಬೇಕಾದರೆ ರಕ್ತವನ್ನೇ ನೀಡಬೇಕು. ಆದ್ದರಿಂದ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. 18 ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದನ್ನು ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

‘ಒಂದು ಯೂನಿಟ್‌ ರಕ್ತದಿಂದ ನಾಲ್ಕು ಜನರ ಪ್ರಾಣ ಉಳಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಉತ್ಸಾಹದಿಂದ ರಕ್ತದಾನ ಮಾಡಲು ಮುಂದೆ ಬರಬೇಕು. ಇದರಿಂದ ಪ್ರಾಣ ಹಾನಿಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು. ರಕ್ತದಾನ ಇತರರಿಗೆ ಮರುಜನ್ಮನೀಡುವ ಶ್ರೇಷ್ಠ ಮತ್ತು ಸಾರ್ಥಕ ಸೇವೆಯಾಗಿದೆ’ ಎಂದು  ತಿಳಿಸಿದರು.

ಈ ಸಂದರ್ಭದಲ್ಲಿ ಕೆಂಪೇಗೌಡ ಸಹಕಾರಿ ಬ್ಯಾಂಕ್ ಅಧ್ಯಕ್ಷ ಗಂಗಾಧರ್ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್ ,ಒಕ್ಕಲಿಗರ ಯುವ ಶಕ್ತಿ ವೇದಿಕೆ ಅಧ್ಯಕ್ಷರಾದ ಪ್ರಮೋದ್ ಗೌಡ ,ಪ್ರಧಾನ ಕಾರ್ಯದರ್ಶಿ ಮಂಜುನಾಥ್ ,ಕೇಬಲ್ ಮಹೇಶ್ ,ನರಸಿಂಹರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಲೋಹಿತ್,
ನವೀನ್ ,ಪ್ರಶಾಂತ್ ,ಉಮೇಶ್, ಶ್ರೀನಿವಾಸ್ ,ಉಲ್ಲಾಸ್ ,ಜೀವನ್, ಶಂಭು ಪಾಟೀಲ  ಇನ್ನಿತರರು ಹಾಜರಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: