ಕ್ರೀಡೆಪ್ರಮುಖ ಸುದ್ದಿವಿದೇಶ

ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ 2032ರ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜಿಸಲು ನಿರ್ಧಾರ : ಐಒಸಿ ಮಾಹಿತಿ

ವಿದೇಶ( ಟೋಕಿಯೊ)ಜು.22:- ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ 2032ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಮಾಹಿತಿ ನೀಡಿದೆ.
2032ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಲು ಬ್ರಿಸ್ಬೇನ್‌ ನ್ನು ಆಯ್ಕೆ ಮಾಡಲಾಗಿದ್ದು, ಆ ಮೂಲಕ 32 ವರ್ಷಗಳ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟ ಆಸ್ಟ್ರೇಲಿಯಾದಲ್ಲಿ ನಡೆಯುವಂತಾಗಿದೆ. ಈ ಹಿಂದೆ 2000ರಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆದಿತ್ತು. ಅದಕ್ಕೂ ಮೊದಲು ಮೆಲ್ಬರ್ನ್ ನಗರ 1956 ರಲ್ಲಿ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಿತ್ತು.

ಈ ಕುರಿತು ಲೈವ್ ಬಂದು ಸಂತಸ ಹಂಚಿಕೊಂಡಿರುವ ಆಸಿಸ್ ಪ್ರಧಾನಿ ಸ್ಕಾಟ್ ಮಾರಿಸನ್ ಅವರು, ಆಸಿಸ್ ನಲ್ಲಿ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಲಿದೆ. ಕ್ರೀಡೆಗೆ ಆಸ್ಟ್ರೇಲಿಯಾದಲ್ಲಿ ಅತ್ಯಂತ ಹೆಚ್ಚು ಮಹತ್ವವಿದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ ಎಂದು ಹೇಳಿದ್ದಾರೆ.

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟ 2024ರಲ್ಲಿ ಪ್ಯಾರಿಸ್ ನಲ್ಲಿ ನಡೆಯಲಿದ್ದು, ಬಳಿಕ 2028ರ ಒಲಿಂಪಿಕ್ಸ್ ಕ್ರೀಡಾಕೂಟ ಲಾಸ್ ಎಂಜಲೀಸ್ ನಲ್ಲಿ ನಡೆಯಲಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: