ಕರ್ನಾಟಕಪ್ರಮುಖ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಜು.30ರೊಳಗೆ ಅರ್ಜಿ ಸಲ್ಲಿಸಬಹುದು : ಸಚಿವ ಸುರೇಶ್ ಕುಮಾರ್

ರಾಜ್ಯ( ಬೆಂಗಳೂರು)ಜು.22:- ಎಸ್ಎಸ್ಎಲ್’ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿರುವ ಅವರು ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದು. ಫಲಿತಾಂಶ ರದ್ದುಪಡಿಸಿಕೊಂಡ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಚಿವ್ಮೆಂಟ್ ಟ್ರ್ಯಾಕಿಂಗ್ ಪೋರ್ಟಲ್ ನಲ್ಲಿ ದಾಖಲಿಸಲು ಜು.30 ಕೊನೆಯ ದಿನವಾಗಿದೆ. ಜು.31ರೊಳಗೆ ಅರ್ಜಿಗಳನ್ನು ಕಡ್ಡಾಯವಾಗಿ ತಮ್ಮ ಜಿಲ್ಲಾ ಉಪನಿರ್ದೇಶಕ ಕಚೇರಿಗೆ ಸಲ್ಲಿಸಬೇಕು. ಉಪ ನಿರ್ದೇಶಕರು ಆಗಸ್ಟ್ 2ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು ಎಂದಿದ್ದಾರೆ.

Leave a Reply

comments

Related Articles

error: