ಮೈಸೂರು

ಎನ್ ಟಿ ಎಂ ಶಾಲೆ ಉಳಿವಿಗಾಗಿ ಇಂದು ಬೆಂಗಳೂರಿಗೆ ತೆರಳಿದ ತಂಡ : ಸಿಎಂಗೆ ಮನವಿ ಸಲ್ಲಿಕೆ

ಮೈಸೂರು,ಜು.22:-  ಎನ್ ಟಿ ಎಂ ಶಾಲೆ ಉಳಿವಿಗಾಗಿ ಇಂದೂ ಕೂಡ ಹೋರಾಟ ಮುಂದುವರಿದಿದ್ದು ಹೋರಾಟ 24ನೇ ದಿನಕ್ಕೆ ಕಾಲಿರಿಸಿದೆ.

ಇಂದು ಬೆಂಗಳೂರಿನಲ್ಲಿ ಹೋರಾಟ ನಡೆಯಲಿದ್ದು, ಹೋರಾಟಗಾರರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದಾರೆ. ಇಂದು ಬೆಳಿಗ್ಗೆಯೇ ಹೋರಾಟಗಾರರು ವಾಹನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.

ಮೈಸೂರಿನ ಪಾರಂಪರಿಕ ಶಾಲೆಯಾದ ಪ್ರಥಮ ಮಹಿಳಾ ಶಾಲೆಯ ಉಳಿವಿಗಾಗಿ ಇಂದು ಬೆಂಗಳೂರಿನಲ್ಲಿ ಹೋರಾಟ ಸಮಿತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಮತ್ತು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುತ್ತಿದೆ. ನಿರಂತರ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಮುಖ್ಯಮಂತ್ರಿಗಳ ಗಮನ ಸೆಳೆಯಲು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು   ಹೋರಾಟಗಾರ ಪ.ಮಲ್ಲೇಶ್ ತಿಳಿಸಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕನ್ನಡ ಪರ ಸಂಘಟನೆಗಳ ಮುಖಂಡರು, ರೈತ ಸಂಘಟನೆಗಳ ಮುಖಂಡರು, ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ಸಾಹಿತಿಗಳು, ಚಿಂತಕರು ತೆರಳಿದ್ದಾರೆ.

ಕನ್ನಡ ಶಾಲೆ ಉಳಿಸಿಕೊಂಡು ಸ್ಮಾರಕ ನಿರ್ಮಾಣ ಮಾಡಲು ನಮ್ಮದೇನೂ ತಕರಾರಿಲ್ಲ. ಶಾಲೆ ಕೆಡವಿ ಸ್ಮಾರಕ ನಿರ್ಮಾಣಕ್ಕೆ ಅವಕಾಶ ಕೊಡುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: