ಮೈಸೂರು

ವರುಣಾ ಕೆರೆಯ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮೈಸೂರು,ಜು.22:- ವರುಣಾ ಕೆರೆಯ ಬಳಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ದಾರಿ ಹೋಕರು ಮೃತದೇಹವನ್ನು ಕಂಡ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮೃತ ವ್ಯಕ್ತಿ ಶಾಯಿ ನೀಲಿ ಬಣ್ಣದ ಪ್ಯಾಂಟ್ ಮತ್ತು ಕಡು ಆಕಾಶ ನೀಲಿ ಬಣ್ಣದ ತುಂಬು ತೋಳಿನ ಶರ್ಟ್ ಧರಿಸಿದ್ದಾರೆ.  ಕೈಮೇಲೆ ಉಪೇಂದ್ರ ಮತ್ತು ಪ್ರಿಯಾಂಕಾ, ಪ್ರಮೀಳಾ ಎಂಬಕ್ಷರದ ಹಚ್ಚೆಯಿದೆ. ಬಲಗೈಗೆ  ಕಪ್ಪು ಮತ್ತು ಕಿತ್ತಳೆ ಬಣ್ಣದ ದಾರವನ್ನು ಕಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: