ಮೈಸೂರು

ಲಾರಿ ಮತ್ತು  ದ್ವಿಚಕ್ರ ವಾಹನದ ನಡುವೆ ಅಪಘಾತ : ಸವಾರ ಸ್ಥಳದಲ್ಲೇ ಸಾವು

ಮೈಸೂರು,ಜು.23:- ಲಾರಿ ಮತ್ತು  ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ಬಸ್ ನಿಲ್ದಾಣದ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ಫೈರೋಜ್ ಪಾಷ (33) ಎಂದು ಗುರುತಿಸಲಾಗಿದೆ. ಅಪಘಾತ ನಡೆದ ಕೂಡಲೇ   ಲಾರಿ ಚಾಲಕ  ಅಲ್ಲಿಂದ  ಓಡಲು ಯತ್ನಿಸಿದ್ದು, ಸಾರ್ವಜನಿಕರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: