ಮೈಸೂರು

ಜು.26ರಿಂದ ಆ.4ರವರೆಗೆ 144 ಜಾರಿಗೊಳಿಸಿ ಪ್ರದೀಪ್ ಗುಂಟಿ ಆದೇಶ

ಮೈಸೂರು,ಜು.24:- ಜು.26ರಿಂದ ಆ.4ರವರೆಗೆ ಕರ್ನಾಟಕ ಮುಕ್ತ ಶಾಲೆ ಕೆಓಎಸ್ ಪರೀಕ್ಷೆಗಳು ಮೈಸೂರು ನಗರದ ನಾರಾಯಣ ಶಾಸ್ತ್ರೀ ರಸ್ತೆಯಲ್ಲಿರುವ ಮಹಾರಾಣಿ ಸರ್ಕಾರಿ ಮಹಿಳಾ ಟಿಟಿಐ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರದ ಸುತ್ತಮುತ್ತ 200ಮೀಟರ್ ಸುತ್ತಳತೆಯಲ್ಲಿ ಕಲಂ 144 ಸಿಆರ್ ಪಿಸಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಉಪ ಪೊಲೀಸ್ ಆಯುಕ್ತ ಪ್ರದೀಪ್ ಗುಂಟಿ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು , ಪರೀಕ್ಷೆ ಸುಸೂತ್ರವಾಗಿ ನಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ ನಿಷೇಧಾಜ್ಞೆ ಜಾರಿಗೆ ಆದೇಶಿಸಿದ್ದಾರೆ. ಟಿಟಿಐ ಕಾಲೇಜಿನಲ್ಲಿ ಕರ್ನಾಟಕ ಮುಕ್ತ ಶಾಲೆ ಕೆಓಎಸ್ ಪರೀಕ್ಷೆ  ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ 200ಮೀಟರ್ ವ್ಯಾಪ್ತಿಯ ಪ್ರದೇಶದ ಸುತ್ತಲೂ ಬೆಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಿರಲಿದ್ದು, ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು. ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಎಂದು ಅವರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: