ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಅಭಿನಯ ಶಾರದೆ, ಕನ್ನಡ ಚಿತ್ರ ರಂಗದ ಹಿರಿಯ ನಟಿ ಜಯಂತಿ ಇನ್ನಿಲ್ಲ

ರಾಜ್ಯ(ಬೆಂಗಳೂರು)ಜು.26:- ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ನಿಧನರಾಗಿದ್ದಾರೆ.
ಅವರಿಗೆ 76ವರ್ಷ ವಯಸ್ಸಾಗಿತ್ತು.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟಿ ಜಯಂತಿ ಎರಡು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೀಗ ಈ ಸಮಸ್ಯೆ ಉಲ್ಭಣಗೊಂಡು, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಜಯಂತಿ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಅಭಿನಯ ಶಾರದೆ ಕಳೆದುಕೊಂಡ ಸ್ಯಾಂಡಲ್‌ವುಡ್‌ನಲ್ಲಿ ಶೋಕದ ಅಲೆ ಎದ್ದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: