ಮೈಸೂರು

ಕೆಲಸ ಮಾಡುತ್ತಿದ್ದ ವೇಳೆ ಪ್ರವಹಿಸಿದ ವಿದ್ಯುತ್ : ಲೈನ್ ಮನ್ ಸಾವು

ಮೈಸೂರು,ಜು.27:-  ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಕಾರಣ ಲೈನ್‌ ಮನ್ ಓರ್ವರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಹೊಸಪುರ ಗ್ರಾಮದ ಬಳಿ ನಡೆದಿದೆ.

ಮೃತರನ್ನು   ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕರಿನಾಯಕ  ಎಂದು ಗುರುತಿಸಲಾಗಿದೆ. ಇವರು   ಹೊಸಪುರದ ಬಳಿ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಇವರ ಸಹ ಉದ್ಯೋಗಿ ಪ್ರಶಾಂತ್ ಎಂಬವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಕರಿನಾಯಕ ಮೃತಪಟ್ಟಿದ್ದಾರೆ.

ಲೈನ್ ಮನ್  ಸಾವಿಗೆ ಕೆಇಬಿ ಅಧಿಕಾರಿಗಳೇ ಕಾರಣರಾಗಿದ್ದು, ಇವರೇ ನೇರ ಹೊಣೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.  ಕರಿನಾಯಕ ಈ ಭಾಗದಲ್ಲಿ ರೈತರಿಗೆ ಅಚ್ಚುಮೆಚ್ಚಿನ ವ್ಯಕ್ತಿಯಾಗಿದ್ದು, ರೈತರ ಕಷ್ಟಕ್ಕೆ ಸ್ಪಂದಿಸುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: