ಕರ್ನಾಟಕಪ್ರಮುಖ ಸುದ್ದಿ

ಜನಪರವಾದಂತಹ ಕೆಲಸಗಳನ್ನು ಮಾಡುತ್ತೇನೆ : ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಋಆ

ರಾಜ್ಯ(ಬೆಂಗಳೂರು)ಜು.27:-  ಜನಪರವಾದಂತಹ ಕೆಲಸಗಳನ್ನು ಮಾಡುತ್ತೇನೆ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಗಳು ಎಂದು ಘೋಷಣೆಯಾಗುತ್ತಲೇ ಶಾಸಕರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬಂತು. ಎಲ್ಲರಿಗೂ ಅವರು ಧನ್ಯವಾದಗಳನ್ನು ತಿಳಿಸಿದರು. ಈ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ. ಜನಪರವಾದಂತಹ ಕೆಲಸಗಳನ್ನು ಮಾಡುತ್ತೇನೆ. ಹಗಲಿರುಳು ಶ್ರಮಿಸುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಹಣಕಾಸಿನ ಸ್ಥಿತಿ ಸುಧಾರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ತಿಳಿಸಿದರು. (ಎಸ್.ಎಚ್)

Leave a Reply

comments

Related Articles

error: