ಕ್ರೀಡೆದೇಶಪ್ರಮುಖ ಸುದ್ದಿ

ಐಸಿಸಿ ಟ್ವೆಂಟಿ-20 ಬ್ಯಾಟ್ಸ್‌ಮನ್‌ ಗಳ ರ‍್ಯಾಂಕಿಂಗ್‌ ನಲ್ಲಿ 10ರೊಳಗಿನ ಸ್ಥಾನ ಕಾಯ್ದುಕೊಂಡ ಕೊಯ್ಲಿ-ರಾಹುಲ್

ದೇಶ( ದುಬೈ)ಜು.29:- ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಭವಿ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅವರು ಐಸಿಸಿ ಟ್ವೆಂಟಿ-20 ಬ್ಯಾಟ್ಸ್‌ಮನ್‌ ಗಳ ರ‍್ಯಾಂಕಿಂಗ್‌ ನಲ್ಲಿ ಅಗ್ರ 10ರೊಳಗಿನ ಸ್ಥಾನಗಳನ್ನು ಕಾಯ್ದುಕೊಂಡಿದ್ದಾರೆ.

ವಿರಾಟ್‌ ಸದ್ಯ ಐದನೇ ಸ್ಥಾನದಲ್ಲಿದ್ದರೆ, ರಾಹುಲ್‌ ಆರನೇ ಕ್ರಮಾಂಕದಲ್ಲಿ ಮುಂದುವರಿದಿದ್ದಾರೆ. ಶ್ರೀಲಂಕಾ ಎದುರಿನ ಸರಣಿಯ ಮೊದಲ ಪಂದ್ಯದಲ್ಲಿ 22 ರನ್‌ಗೆ ನಾಲ್ಕು ವಿಕೆಟ್ ಗಳಿಸಿದ್ದ ಭುವನೇಶ್ವರ್‌ ಕುಮಾರ್‌ ಅವರು ಬೌಲರ್‌ಗಳ ವಿಭಾಗದಲ್ಲಿ 16ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ ಅವರ ರ‍್ಯಾಂಕಿಂಗ್‌ನಲ್ಲೂ ಏರಿಕೆಯಾಗಿದೆ. 10 ಸ್ಥಾನಗಳ ಬಡ್ತಿ ಪಡೆದಿರುವ ಅವರು ಸದ್ಯ 21ನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ ಜೀವನಶ್ರೇಷ್ಠ ಎರಡನೇ ಸ್ಥಾನಕ್ಕೇರಿದ್ದಾರೆ.
ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ರೋಹಿತ್ ಶರ್ಮಾ 14ನೇ ಸ್ಥಾನಕ್ಕೆ ಕುಸಿದಿದ್ದು, ಶಿಖರ್ ಧವನ್ 29ನೇ ಸ್ಥಾನದಲ್ಲಿದ್ದಾರೆ.

ಏಕದಿನ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನದ ಬಾಬರ್ ಆಜಂ ಅಗ್ರಸ್ಥಾನದಲ್ಲಿದ್ದು, ವಿರಾಟ್‌ ಹಾಗೂ ರೋಹಿತ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳಲ್ಲಿ ಪಟ್ಟಿಯಲ್ಲಿ ಜಸ್‌ಪ್ರೀತ್ ಬೂಮ್ರಾ ಏಳನೇ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್‌ಗಳ ವಿಭಾಗದಲ್ಲಿ ರವೀಂದ್ರ ಜಡೇಜ ಒಂಭತ್ತನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: