ಮೈಸೂರು

ವಿಶ್ವ ಹುಲಿ ದಿನಾಚರಣೆ ಹಿನ್ನೆಲೆಯಲ್ಲಿ ಸೈಕಲ್ ಜಾಥ, ರಸಪ್ರಶ್ನೆ ಸ್ಪರ್ಧೆ

ಮೈಸೂರು,(ಎಚ್.ಡಿ.ಕೋಟೆ),ಜು.29-ಅರಣ್ಯ ಇಲಾಖೆ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಬೆಂಗಳೂರು ಪರಿಕ್ರಮ ತಂಡ ಸಂಯುಕ್ತಾಶ್ರಯದಲ್ಲಿ ತಾಲೂಕಿನ ದಮ್ಮನಕಟ್ಟೆ ಸಫಾರಿ ಕೇಂದ್ರದಲ್ಲಿ ವಿಶ್ವ ಹುಲಿ ದಿನಾಚರಣೆ ಆಚರಿಸಲಾಯಿತು.

ಸಾರ್ವಜನಿಕರಲ್ಲಿ ಹುಲಿ ಸಂರಕ್ಷಣೆಯ ಮಹತ್ವದ ಕುರಿತಾಗಿ ಜಾಗೃತಿ ಮೂಡಿಸುವ ಸಲುವಾಗಿ ಆನೆಚೌಕೂರಿನಿಂದ ಕಾಕನಕೋಟೆ ಸಫಾರಿ ಕೇಂದ್ರದವರೆಗೆ ಒಟ್ಟು 80 ಕಿ.ಮೀ ವರೆಗೆ ಸೈಕಲ್ ಜಾಥ ನಡೆಸಲಾಯಿತು. ಜಾಥಾದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಅಂತರಸಂತೆ ವನ್ಯಜೀವಿ ವಲಯದ ಸಫಾರಿಗೆ ಬರುವ ಪ್ರವಾಸಿಗರ ಒಟ್ಟು ನಾಲ್ಕು ತಂಡಗಳಿಗೆ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.

ಇದೇ ಸಂದರ್ಭದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್ ಮೋಹನ್ ರಾಜ್ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಧಿಕೃತ ಲಾಂಛನ ಅನಾವರಣಗೊಳಿಸಲಾಯಿತು. ನಂತರ ಅರಣ್ಯವೀಕ್ಷಕ ಹುದ್ದೆಯಿಂದ ಅರಣ್ಯರಕ್ಷಕ ಹುದ್ದೆಗೆ ಬಡ್ತಿ ಹೊಂದಿದ ಸಿಬ್ಬಂದಿಗಳಿಗೆ ಸ್ಟಾರ್ ಪಿಫ್ಟಿಂಗ್ ಕಾರ್ಯಕ್ರಮ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹುಣಸೂರು ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ಡಿ.ಮಹೇಶ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಸ್.ಪಿ.ಮಹಾದೇವ್, ಎ.ವಿ.ಸತೀಶ್, ಕೆ.ಪಿ.ಗೋಪಾಲ್ ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

 

Leave a Reply

comments

Related Articles

error: