ಮೈಸೂರು

ವೈದ್ಯಕೀಯ ಶೈಕ್ಷಣಿಕ ಮೀಸಲಾತಿ ಕುರಿತು ಮಹತ್ವದ ನಿರ್ಧಾರ : ಸ್ವಾಗತ

ಮೈಸೂರು,ಜು.29:-  ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಹಿಂದುಳಿದ ವರ್ಗಗಳ ವೈದ್ಯಕೀಯ ಶೈಕ್ಷಣಿಕ ಮೀಸಲಾತಿಯ ಬಗ್ಗೆ ಮಹತ್ತರವಾದ ನಿರ್ಧಾರ ವನ್ನು  ಕೈಗೊಂಡಿದ್ದು ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರು ಸ್ವಾಗತಿಸಿದ್ದಾರೆ.

ಅಧ್ಯಕ್ಷ ಜೋಗಿ ಮಂಜು ಹೇಳಿಕೆ ನೀಡಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ/ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ಅಖಿಲ ಭಾರತ ಕೋಟಾ ಯೋಜನೆಯಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಮತ್ತು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ 10% ಮೀಸಲಾತಿ ನೀಡಲು ಮೋದಿ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ನಿರ್ಧಾರದಿಂದಾಗಿ, ಪ್ರತಿವರ್ಷ ಸಾವಿರಾರು ಯುವಕರಿಗೆ ಉತ್ತಮ ಅವಕಾಶಗಳನ್ನು ಪಡೆಯಲು ಮತ್ತು ನಮ್ಮ ದೇಶದಲ್ಲಿ ಸಾಮಾಜಿಕ ನ್ಯಾಯದ ಹೊಸ ಮಾದರಿಯನ್ನು ಸೃಷ್ಟಿಸಲು ಅಪಾರವಾಗಿ ಸಹಾಯವಾಗಲಿದೆ.  ನರೇಂದ್ರ ಮೋದಿಯವರ ಸಚಿವ ಸಂಪುಟಕ್ಕೆ ಅಭಿನಂದನೆಗಳು ಎಂದಿದ್ದಾರೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: