ದೇಶಪ್ರಮುಖ ಸುದ್ದಿ

ಪುಲ್ವಾಮಾದಲ್ಲಿ   ಎನ್ಕೌಂಟರ್ : ಇಬ್ಬರು ಉಗ್ರರ ಹತ್ಯೆ

ದೇಶ(ಶ್ರೀನಗರ)ಜು.31:-  ಭಾರತೀಯ ಸೇನಾಪಡೆ  ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ   ಎನ್ಕೌಂಟರ್ ನಡೆಸಿದ್ದು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು   ತಿಳಿದುಬಂದಿದೆ.

ಪುಲ್ವಾಮದ ನಾಗ್ಬೆರನ್-ಟಾರ್ಸಾರ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳದಲ್ಲಿ ಎನ್ಕೌಂಟರ್ ಆರಂಭಿಸಿದ ಸೇನಾಪಡೆ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: