ಸುದ್ದಿ ಸಂಕ್ಷಿಪ್ತ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಲಸಿಕೆ ಕಾರ್ಯಕ್ರಮ

ಮೈಸೂರು, ಜು  31 :- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಮೈಸೂರು ಕೊಡಗು ಸಂಸದರಾದ ಪ್ರತಾಪ್ ಸಿಂಹ ಅವರ ಸಹಯೋಗದೊಂದಿಗೆ ಆಗಸ್ಟ್ 1ರಂದು ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ಧನ್ವಂತರಿ ರಸ್ತೆಯಲ್ಲಿರುವ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ 18 ವರ್ಷ ಮೇಲ್ಪಟ್ಟ ಎಲ್ಲಾ ಸದಸ್ಯರಿಗೆ ಕೋವಿಡ್ ಲಸಿಕೆ ನೀಡಲಾಗುವುದು.
ಲಸಿಕೆ ಪಡೆಯಲು ಬರುವ ಸರ್ಕಾರಿ ನೌಕರರು ತಮ್ಮ ಇಲಾಖೆಯಿಂದ ನೀಡಿರುವ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಮತ್ತು ಮೊಬೈಲ್‌ ಅನ್ನು ತರಬೇಕೆಂದು ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: