ಸುದ್ದಿ ಸಂಕ್ಷಿಪ್ತ

 ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಮೈಸೂರು,ಜು. 31 :- 2021-22ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಮೈಸೂರು ಜಿಲ್ಲೆಯಲ್ಲಿ ವಾಸಿಸುವ ಪರಿಶಿಷ್ಟ ಪಂಗಡಗಳ ಮತ್ತು ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಹಾಗೂ ಆದಿವಾಸಿ ಜನಾಂಗದ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೊ ಕ್ರೆಡಿಟ್ ಫನಾನ್ಸ್) ಯೋಜನೆ (ನೊಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ (ಭೂ ರಹಿತ ಕೃಷಿ ಕಾರ್ಮಿಕ ಮಹಿಳೆಗೆ ಮಾತ್ರ) ಈ ಯೊಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಫಲಾಪೇಕ್ಷಿಗಳು ಆಗಸ್ಟ್ 25 ರೊಳಗಾಗಿ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ವೆಬ್‌ಸೈಟ್  https://kmvstdcl.karnataka.gov.in ಮೂಲಕ ಅಪ್‌ಲೋಡ್ ಮಾಡಬಹುದು. ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಮತ್ತು ಷರತ್ತುಗಳನ್ನು ನಿಗಮದ ಜಿಲ್ಲಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಸಾಮಾನ್ಯ ಅರ್ಹತೆಗಳೆಂದರೆ, ಸ್ವಯಂ ಉದ್ಯೋಗ, ಉದ್ಯಮ ಶೀಲತಾ ಯೋಜನೆಗೆ 50 ವರ್ಷ ಮೀರಿರಬಾರದು ಹಾಗೂ ಇನ್ನುಳಿದ ಯೋಜನೆಗೆ 60 ವರ್ಷದೊಳಗಿರಬೇಕು. ಫಲಾಪೇಕ್ಷಿಗಳ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವವರಿಗೆ ರೂ.1.50 ಲಕ್ಷ, ನಗರ ಪ್ರದೇಶದಲ್ಲಿ ವಾಸಿಸುವವರಿಗೆ ರೂ. 2.00 ಲಕ್ಷ ಮಿತಿಯಲ್ಲಿರಬೇಕು ಹಾಗೂ ಕುಟುಂಬದ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ನೌಕರರಾಗಿರಬಾರದು.

ಈ ಹಿಂದೆ ನಿಗಮದಿಂದ ಯಾವುದಾದರೂ ಸೌಲಭ್ಯ ಪಡೆದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದೂ.ಸಂ 0821-2430022ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: