ಸುದ್ದಿ ಸಂಕ್ಷಿಪ್ತ

ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮೈಸೂರು, ಜು . 31 :- ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ, ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ (INNOVATION) ವಿನ್ಯಾಸ ಒಳಗೊಂಡಂತೆ, ತಾರ್ಕಿಕ (SCHOLASTIC) ಸಾಧನೆಗಳು ಕ್ರೀಡೆ, (ಕಲೆ, ಸಾಂಸ್ಕೃತಿಕ, ಸಂಗೀತ) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5 ವರ್ಷ ಮೇಲ್ಪಟ್ಟಿರುವ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಮಟ್ಟದ ಪ್ರಶಸ್ತಿಯು ತಲಾ ರೂ.10,000/- ನಗದು ಬಹುಮಾನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ ವಿನ್ಯಾಸ ಒಳಗೊಂಡಂತೆ, ತಾರ್ಕಿಕ ಸಾಧನೆಗಳು ಕ್ರೀಡೆ, (ಕಲೆ, ಸಾಂಸ್ಕೃತಿಕ, ಸಂಗೀತ) ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆಯನ್ನು ಹೊಂದಿರತಕ್ಕದ್ದು. ಹಿಂದಿನ ವರ್ಷಗಳಲ್ಲಿ ತಮ್ಮ ಪ್ರಸ್ತಾವನೆಯು ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸಲು ಅವಕಾಶವಿರುವುದಿಲ್ಲ.
ನಿಗದಿತ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿ.ಎಸ್-1, ಹೈಟೆಂಕ್ಷನ್ ಲೈನ್ ರಸ್ತೆ, ಕೃಷ್ಣದೇವರಾಯ ಸರ್ಕಲ್, ವಿಜಯನಗರ 2ನೇ ಹಂತ, ಮೈಸೂರು-17, ಇಲ್ಲಿ ಕಚೇರಿ ಕೆಲಸದ ವೇಳೆಯಲ್ಲಿ ಪಡೆದುಕೊಂಡು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಏಕ ಪ್ರತಿಯಲ್ಲಿ ಅಗಸ್ಟ್ 20 ರೊಳಗೆ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆ: 0821-2498031 ಅಥವಾ 2495432 ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

comments

Related Articles

error: