ಕರ್ನಾಟಕಪ್ರಮುಖ ಸುದ್ದಿ

ಬೆಳೆ ಸಮೀಕ್ಷೆ ನೋಂದಣಿಗೆ ಅವಕಾಶ: ಚಾರುಲತಾ ಸೋಮಲ್

ರಾಜ್ಯ( ಮಡಿಕೇರಿ),ಆ.2:- ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಅಭಿವೃದ್ಧಿ ಪಡಿಸಿರುವ ‘ರೈತ ಬೆಳೆ ಸಮೀಕ್ಷೆ ಆಪ್ 2021-22’ ಮೂಲಕ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಬಹುದಾಗಿದೆ. ಬೆಳೆ ಸಮೀಕ್ಷೆಯ ಯೋಜನೆಯನ್ವಯ ಜಿಲ್ಲೆಯ ರೈತರು ಜಮೀನಿನ ಸರ್ವೆ ನಂ. ಹಿಸ್ಸಾ ನಂಬರ್‍ವಾರು ತಾವು ಬೆಳೆದ ಕೃಷಿ ಬೆಳೆ, ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆಗಳನ್ನು ಪ್ಲೇಸ್ಟೋರ್‍ನಲ್ಲಿ ಲಭ್ಯವಿರುವ ಬೆಳೆ ಸಮೀಕ್ಷೆ ಮಬೈಲ್ ಆಪ್ ಡೌನ್‍ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮಾಡುವುದರ ಮೂಲಕ ನೋಂದಣಿಸಬಹುದಾಗಿದೆ.
ಪ್ರಸಕ್ತ (2021-22) ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಕೊಡಗು ಜಿಲ್ಲೆಯಾದ್ಯಂತ ಆರಂಭವಾಗಿದ್ದು, ಸರ್ಕಾರದ ಆದೇಶದ ಅನುಸಾರ ಈ ಬಾರಿಯು ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು “ಫಾರ್ಮರ್ಸ್ ಕ್ರಾಪ್ ಸರ್ವೆ-2021-22” ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ.
ಬೆಳೆ ಸಮೀಕ್ಷೆ ಮಾಹಿತಿಯನ್ನು ಹಲವು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ. ಎನ್‍ಡಿಆರ್‍ಎಫ್/ ಎಸ್‍ಡಿಆರ್‍ಎಫ್ ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ಕಷ್ಟ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯಗಳಿಗೆ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಬಳಸಲಾಗುತ್ತದೆ.
ರೈತರು ಬೆಳೆ ಸಮೀಕ್ಷೆ ಮೊಬೈಲ್ ಆಪ್ ಅನ್ನು ಬಳಸಲು ಗೂಗಲ್ ಪ್ಲೆಸ್ಟೋರ್‍ನಲ್ಲಿ “ಫಾರ್ಮರ್ಸ್ ಕ್ರಾಪ್ ಸರ್ವೆ-2021-22” ನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಆರ್ಥಿಕ ವರ್ಷ ಹಾಗೂ ಋತು, ಆಧಾರ್ ವಿವರಗಳನ್ನು ದಾಖಲಿಸುವುದು. ರೈತರ ಹೆಸರು, ಮೊಬೈಲ್ ಸಂಖ್ಯೆ ಓ.ಟಿ.ಪಿ ನಮೂದಿಸಿ ರೈತರು ತಮ್ಮ ವಿವರಗಳನ್ನು ನೋಂದಣಿ ಮಾಡಿಕೊಳ್ಳಬೇಕು. ಮೊಬೈಲ್ ಆಪ್‍ನಲ್ಲಿ ಮೊದಲು ಮಾಸ್ಟರ್ ವಿವರ ಮತ್ತು ಮಾಲೀಕರ ವಿವರ, ಪಾಲಿಗಾನ್ ಹಾಗೂ ಜಿಐಎಸ್. ಮ್ಯಾಪ್ ಡೌನ್‍ಲೋಡ್ ಮಾಡಿಕೊಳ್ಳುವುದು.
ಬೆಳೆ ಸರ್ವೆ ಪ್ರಾರಂಭಿಸಿ ಕ್ಲಿಕ್ ಮಾಡುವುದು. ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ ತಮ್ಮ ಜಮೀನಿನ ಸರ್ವೆ ನಂಬರ್‍ಗಳನ್ನು ಆಪ್‍ಗೆ ಸೇರಿಸಿಕೊಳ್ಳಬೇಕು ಹಾಗೂ ಹಿಸ್ಸಾ ಇದ್ದರೆ ಆಯ್ಕೆ ಮಾಡಬೇಕು. ಮಾಲೀಕರ ಹೆಸರು ಆಯ್ಕೆ ಮಾಡಿ, ಕ್ಷೇತ್ರ ನಮೂದಿಸುವುದು. ಮಾಲೀಕರ ಪರವಾಗಿ ಇನ್ನೊಬ್ಬರ ಬೆಳೆ ದಾಖಲೆ ಮಾಡುತ್ತಿದ್ದರೆ ರೈತರ ಪರವಾಗಿ ಬೆಳೆ ಮಾಹಿತಿಯನ್ನು ದಾಖಲಿಸುತ್ತಿದ್ದೆನೆಂದು ಆಯ್ಕೆ ಮಾಡುವುದು. ರೈತರ ಪರವಾಗಿ ದಾಖಲಿಸುತ್ತಿದ್ದರೆ, ಈ ರೈತರ ಮೊಬೈಲ್ ನಂಬರ್ ದಾಖಲಿಸಿ ಮಾಹಿತಿಯನ್ನು ಡೌನ್‍ಲೋಡ್ ಮಾಡುವುದು. ರೈತರ ಹೊಲಕ್ಕೆ ಹೋಗಿ ಸರ್ವೆ ನಂಬರ್‍ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ 2 ಫೋಟೋ ತೆಗೆದು, ಅಪ್ಲೋಡ್ ಮಾಡಿ ಮಾಹಿತಿ ಸೇರಿಸುವುದು.
ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲೆಯ ರೈತರು ಈ ಅವಕಾಶದ ಸದುಪಯೋಗ ಪಡೆದುಕೊಂಡು “ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ನಮೂದಿಸಲು ಕ್ರಮಗಳನ್ನು ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕೋರಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: