ದೇಶಪ್ರಮುಖ ಸುದ್ದಿ

ಹತ್ಯೆ ಪ್ರಕರಣ: ಕುಸ್ತಿ ಪಟು ಸುಶೀಲ್ ಕುಮಾರ್ ವಿರುದ್ಧ ಚಾರ್ಜ್ ಶೀಟ್

ನವದೆಹಲಿ,ಆ.2- ಕುಸ್ತಿ ಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಮತ್ತು 19 ಇತರ ಮಂದಿ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಕಿರಿಯ ರಾಷ್ಟ್ರಿಯ ಕುಸ್ತಿ ಚಾಂಪಿಯನ್ ನ್ನು ಛತ್ರಸಾಲ್ ಸ್ಟೇಡಿಯಂ ನಲ್ಲಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚಾರ್ಜ್ ಶೀಟ್ ದಾಖಲಾಗಿದ್ದು, ಸುಶೀಲ್ ಕುಮಾರ್ ಪ್ರಮುಖ ಆರೋಪಿಯಾಗಿದ್ದಾರೆ.

ಸುಶೀಲ್ ಕುಮಾರ್ ಅವರನ್ನು ಮುಖ್ಯ ಆರೋಪಿಯನ್ನಾಗಿ ಹೆಸರಿಸಿದ ಅಂತಿಮ ವರದಿಯನ್ನು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಸಿಎಂಎಂ) ಸತ್ವೀರ್ ಸಿಂಗ್ ಲಂಬಾ ಅವರಿಗೆ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ಹದಿನೈದು ಆರೋಪಿಗಳನ್ನು ಬಂಧಿಸಲಾಗಿದ್ದು, ಐವರು ತಲೆಮರೆಸಿಕೊಂಡಿದ್ದಾರೆ.

ಮೇ 4ರ ಮಧ್ಯರಾತ್ರಿ ಸುಶೀಲ್ ಕುಮಾರ್ ಮತ್ತು ಆತನ ಸಹಚರರು 23 ವರ್ಷದ ಕುಸ್ತಿಪಟು ಸಾಗರ್ ಧನ್‌ಕರ್ ಹಾಗೂ ಅವನ ಇಬ್ಬರು ಸ್ನೇಹಿತರಾದ ಸೋನು ಮತ್ತು ಅಮಿತ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ  ಗಂಭೀರವಾಗಿ ಗಾಯಗೊಂಡಿದ್ದ ಧನ್‌ಕರ್ ಮೃತಪಟ್ಟಿದ್ದರು.

ಸುಶೀಲ್‌ ಕುಮಾರ್ ಅವರೇ ಪ್ರಕರಣದ ‘ಪ್ರಮುಖ ಆರೋಪಿ ಮತ್ತು ಕೊಲೆಯ ಮಾಸ್ಟರ್‌ ಮೈಂಡ್’ಎಂದು ಪೊಲೀಸರು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಎಲೆಕ್ಟ್ರಾನಿಕ್ ಪುರಾವೆಗಳಿವೆ. ಅದರಲ್ಲಿ ಸುಶೀಲ್ ಮತ್ತು ಆತನ ಸಹಚರರು ಧನ್‌ಕರ್‌ ಅವರನ್ನು ಲಾಠಿಗಳಿಂದ ಹೊಡೆಯುವುದನ್ನು ಕಾಣಬಹುದು ಎಂದಿದ್ದರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: