ಕರ್ನಾಟಕಪ್ರಮುಖ ಸುದ್ದಿ

ಹೊರ ರಾಜ್ಯದಿಂದ ಕೊಡಗು ಜಿಲ್ಲೆಗೆ ಬರುವವರಿಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲು ನಿರ್ದೇಶನ

ರಾಜ್ಯ(ಮಡಿಕೇರಿ) ಆ.3:- ಸರ್ಕಾರದ ಆದೇಶದಂತೆ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಹಾಗೂ ಸೋಂಕು ಹೆಚ್ಚಳವಾಗದಂತೆ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲು ನಿರ್ದೇಶನವಿದೆ.
ಕೊಡಗು ಜಿಲ್ಲೆಯು ನೆರೆಯ ರಾಜ್ಯದೊಂದಿಗೆ ಗಡಿಯನ್ನು ಹೊಂದಿದ್ದು, ಈ ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಹೋಟೆಲ್, ಹೋಂ-ಸ್ಟೇ, ರೆಸಾರ್ಟ್, ಲಾಡ್ಜ್ ಮುಂತಾದ ವಾಸ್ತವ್ಯ ಸೇವೆಗಳನ್ನು ನೀಡುವ ಸ್ಥಳಗಳಿಗೆ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಅವಧಿಯ ಒಳಗೆ ಪಡೆದ ಆರ್‍ಟಿಪಿಸಿಆರ್ ನೆಗಟಿವ್ ವರದಿ ಹೊಂದಿರತಕ್ಕದ್ದು, ಇದನ್ನು ಖಚಿತಪಡಿಸಿಕೊಳ್ಳುವುದು ಆಯಾಯ ಸಂಸ್ಥೆಗಳ/ ವ್ಯವವಸ್ಥಾಪಕರ/ ಮಾಲೀಕರ ಜವಾಬ್ದಾರಿ ಆಗಿರುತ್ತದೆ. ಯಾರೇ ವ್ಯಕ್ತಿ ಇತರೆಡೆಯಿಂದ ಜಿಲ್ಲೆಗೆ ಆಗಮಿಸಿದಲ್ಲಿ ಅವರ ವಿವರಗಳನ್ನು ಸಂಬಂಧಪಟ್ಟ ಕಾರ್ಯವ್ಯಾಪ್ತಿಯ ಗ್ರಾಮೀಣ/ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶದ ಉಲ್ಲಂಘನೆ / ದುರುಪಯೋಗವು ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಆಕ್ಟ್-2005ರ ಕಲಂ 51 ರಿಂದ 60, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್-2020ರ ಕಲಂ 9, ಭಾರತೀಯ ದಂಡ ಸಂಹಿತೆ 1860ರ ಕಲಂ 188 ಮತ್ತು ಇನ್ನಿತರ ಸಂಬಂಧಿತ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

 

Leave a Reply

comments

Related Articles

error: