ಕ್ರೀಡೆಪ್ರಮುಖ ಸುದ್ದಿ

ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಇಂಗ್ಲೆಂಡ್ ತಂಡದಿಂದ ಬ್ಯಾಟಿಂಗ್ ಆಯ್ಕೆ

ನಾಟಿಂಗ್‌ಹ್ಯಾಮ್‌,ಆ.4-ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಟ್ರೆಂಟ್‌ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಆಘಾತಕ್ಕೊಳಗಾಗಿದೆ. ಇಂಗ್ಲೆಂಡ್‌ ತಂಡದ ಎಡಗೈ ಆರಂಭಿಕ ಬ್ಯಾಟ್ಸ್‌ಮನ್‌ ರೋರಿ ಬರ್ನ್ಸ್‌ ಅವರು ಜಸ್‌ಪ್ರೀತ್‌ ಬುಮ್ರಾ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದು ಶೂನ್ಯ ಸಂಪಾದನೆಯೊಂದಿಗೆ ಪೆವಿಲಿಯನ್ ಸೇರಿದರು. ಸದ್ಯ ಇಂಗ್ಲೆಂಡ್ ತಂಡ 11.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿ ಆಡುತ್ತಿದೆ.

ಇನ್ನು ಟೀಂ ಇಂಡಿಯಾ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಮಹತ್ವದ ಬದಲಾವಣೆ ತಂದುಕೊಂಡಿದೆ. ಕೆಎಲ್‌ ರಾಹುಲ್‌ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ಕಮ್‌ಬ್ಯಾಕ್‌ ಮಾಡಿದ್ದಾರೆ. ಆದರೆ ಬೌಲಿಂಗ್‌ ವಿಭಾಗದಲ್ಲಿ ಸ್ಟಾರ್‌ ಸ್ಪಿನ್ನರ್‌ ಆರ್‌ ಅಶ್ವಿನ್‌ ಅವರನ್ನು ಕೈಬಿಟ್ಟು ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿಕೊಂಡಿದೆ.

ಬೌಲಿಂಗ್ ವಿಭಾಗದಲ್ಲಿ ಅನುಭವಿ ಇಶಾಂತ್ ಶರ್ಮಾ ಅವರನ್ನು ಹೊರಗಿಟ್ಟು ಮೊಹಮ್ಮದ್‌ ಶಮಿ, ಶಾರ್ದುಲ್‌ ಠಾಕೂರ್‌, ಜಸ್‌ಪ್ರೀತ್‌ ಬುಮ್ರಾ ಮತ್ತು ಮೊಹಮ್ಮದ್‌ ಸಿರಾಜ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇಶಾಂತ್‌ ಶರ್ಮಾ ಫಿಟ್ನೆಸ್‌ ಸಮಸ್ಯೆ ಕಾರಣ ಈ ಪಂದ್ಯದಿಂದ ಹೊರಗುಳಿದಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: