ಕ್ರೀಡೆದೇಶಪ್ರಮುಖ ಸುದ್ದಿವಿದೇಶ

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ  ಇತಿಹಾಸ ನಿರ್ಮಿಸಿದ ಭಾರತ ಹಾಕಿ ತಂಡ : ಲಭಿಸಿತು ಕಂಚಿನ ಪದಕ

ವಿದೇಶ(ಟೋಕಿಯೋ)ಆ.5:- ಭಾರತ ಹಾಕಿ ತಂಡ  ಬರೋಬ್ಬರಿ 4 ದಶಕಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ  ಇತಿಹಾಸ ನಿರ್ಮಿಸಿದ್ದು  41 ವರ್ಷಗಳ ಬಳಿಕ ಭಾರತಕ್ಕೆ ಪದಕ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದೆ.

ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದ್ದು, ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ.

ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಗುರುವಾರ ನಡೆದ ಮೂರನೇ ಸ್ಥಾನಕ್ಕಾಗಿ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿ ಕಂಚಿನ ಪದಕ ಗೆದ್ದಿದೆ. ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವಿರೋಚಿತ ಪ್ರತಿರೋಧದ ಹೊರತಾಗಿಯೂ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಅರ್ಹ ಗೆಲುವು ದಾಖಲಿಸಲು ನೆರವಾಗಿದ್ದು,  41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದುಕೊಟ್ಟಿದ್ದಾರೆ.

ಈ ಹಿಂದೆ 1980ರ ಮಾಸ್ಕೊ ಒಲಿಂಪಿಕ್ಸ್‌ನಲ್ಲಿ ಭಾರತ ಚಿನ್ನದ ಪದಕ ಜಯಿಸಿತ್ತು. ಈಗ 41 ವರ್ಷಗಳ ಬಳಿಕ ಮತ್ತೆ ಪದಕ ಗೆದ್ದ ಸಾಧನೆ ಮಾಡಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: