ಕರ್ನಾಟಕಪ್ರಮುಖ ಸುದ್ದಿ

ಶಾಸಕ ಜಮೀರ್ ಅಹಮದ್ ಮನೆ ಮೇಲೆ ಐಟಿ ದಾಳಿ : ಮಾಜಿ ಸಚಿವ ರೋಷನ್ ಬೇಗ್ ಗೆ ಇಡಿ ಶಾಕ್

ರಾಜ್ಯ(ಬೆಂಗಳೂರು)ಆ.5:- ಶಾಸಕ ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಜಮೀರ್ ಅಹ್ಮದ್ ಖಾನ್ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಂಜಾನೆ ಆರು ಗಂಟೆಗೆ ಅಧಿಕಾರಿಗಳು ಜಮೀರ್ ಅಹ್ಮದ್ ಅವರ ಮನೆ, ಹಾಗೂ ಅವರಿಗೆ ಸಂಬಂಧಿಸಿದ ಪ್ಲ್ಯಾಟ್ ಗಳ ಮೇಲೆ ದಾಳಿ ನಡೆಸಿದ್ದಾರೆ.
ಶೋಧ ಕಾರ್ಯ ಮುಂದುವರಿದಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಜಮೀರ್ ಅಹ್ಮದ್ ಸಾರಿಗೆ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ರಾಜಕೀಯದ ಹೊರತಾಗಿ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದರು.ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
ಗುರುವಾರ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕಳೆದ ಎರಡೂವರೆ ಗಂಟೆಗಳಿಂದ ನಿರಂತರ ಶೋಧ ನಡೆಸುತ್ತಿದ್ದಾರೆ. ಮನೆ, ಫ್ಲ್ಯಾನ್ ಮತ್ತು ಕಚೇರಿಯಲ್ಲಿರುವ ಹಣ ಮತ್ತು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇದೇ ವೇಳೆ ಮಾಜಿ ಸಚಿವ ರೋಷನ್ ಬೇಗ್ ಅವರ ಮನೆಯ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೋಷನ್ ಬೇಗ್ ಅವರ ನಿವಾಸ ಸೇರಿದಂತೆ ಒಟ್ಟು 6ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಾಜಿನಗರದಲ್ಲಿರುವ ರೋಷನ್ ಬೇಗ್ ಅವರ ಮನೆ, ಕಛೇರಿ, ಆಪ್ತರ ಮನೆಯ ಮೇಲೆಯೂ ದಾಳಿ ನಡೆದಿದೆ. ದೆಹಲಿಯಿಂದ ಆಗಮಿಸಿದ ನೂರು ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗಿಯಾಗಿದ್ದು, ಸಿಆರ್ ಪಿಎಫ್ ಅಧಿಕಾರಿಗಳ ಭದ್ರತೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: