ದೇಶಪ್ರಮುಖ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42 ಸಾವಿರಕ್ಕೂ ಹೆಚ್ಚು ಪ್ರಕರಣ ಪತ್ತೆ : 533 ಸೋಂಕಿತರ ಸಾವು

ದೇಶ(ನವದೆಹಲಿ)ಆ.5:- ಭಾರತದಲ್ಲಿ ಕೊರೋನಾ ಎರಡನೇ ಅಲೆಯ ಬಿಕ್ಕಟ್ಟು ಇನ್ನೂ ಮುಂದುವರಿದಿದೆ. ಪ್ರತಿ ದಿನ 40 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ.

ಗುರುವಾರ ಬೆಳಿಗ್ಗೆ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 42,982 ಹೊಸ ಕೊರೋನಾ ಪ್ರಕರಣಗಳು ಬಂದಿವೆ. 533 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳದಲ್ಲಿ ಕಳೆದ ದಿನ ಗರಿಷ್ಠ 22,414 ಹೊಸ ಪ್ರಕರಣಗಳು ವರದಿಯಾಗಿವೆ. ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 41,726 ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಅಂದರೆ 723 ಸಕ್ರಿಯ ಪ್ರಕರಣಗಳು ನಿನ್ನೆ ಹೆಚ್ಚಾಗಿದೆ.

ಸಾಂಕ್ರಾಮಿಕ ರೋಗದ ಆರಂಭದಿಂದಲೂ ಒಟ್ಟು ಮೂರು ಕೋಟಿ 18 ಲಕ್ಷ 12 ಸಾವಿರ ಜನರು ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 4 ಲಕ್ಷ 26 ಸಾವಿರದ 290 ಜನರು ಸಾವನ್ನಪ್ಪಿದ್ದಾರೆ. ಗುಡ್ ನ್ಯೂಸ್ ಏನೆಂದರೆ   3 ಕೋಟಿ 9 ಲಕ್ಷ 74 ಸಾವಿರ ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಇನ್ನೂ ನಾಲ್ಕು ಲಕ್ಷಕ್ಕಿಂತ ಹೆಚ್ಚಿದೆ. ಒಟ್ಟು 4 ಲಕ್ಷ 11 ಸಾವಿರ ಜನರು ಇನ್ನೂ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದು  ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಸಚಿವಾಲಯದ ಪ್ರಕಾರ ಆಗಸ್ಟ್ 4 ರವರೆಗೆ ದೇಶಾದ್ಯಂತ 48 ಕೋಟಿ 93 ಲಕ್ಷ ಡೋಸ್ ಕೊರೋನಾ ಲಸಿಕೆ ನೀಡಲಾಗಿದೆ. ನಿನ್ನೆ  37.55 ಲಕ್ಷ ಲಸಿಕೆಗಳನ್ನು ನೀಡಲಾಗಿದೆ. ಅದೇ ವೇಳೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ  ಇದುವರೆಗೆ 47 ಕೋಟಿ 48 ಲಕ್ಷ ಕೊರೋನಾ ಪರೀಕ್ಷೆಗಳನ್ನು ಮಾಡಲಾಗಿದೆ. ಕೊನೆಯ ದಿನದಲ್ಲಿ ಸುಮಾರು 16.64 ಲಕ್ಷ ಕೊರೋನಾ ಮಾದರಿ ಪರೀಕ್ಷೆಗಳನ್ನು ಮಾಡಲಾಗಿದ್ದು  ಧನಾತ್ಮಕ ದರವು ಶೇಕಡಾ 3 ಕ್ಕಿಂತ ಕಡಿಮೆ ಇದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: