ದೇಶಪ್ರಮುಖ ಸುದ್ದಿ

ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ.ನ ಆರೋಗ್ಯ ವಿಮೆ

ನವದೆಹಲಿ,ಆ.5-ಕೋವಿಡ್ 19 ಸೋಂಕಿನಿಂದ ತಂದೆ-ತಾಯಿಯರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಐದು ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮಾ ಸುರಕ್ಷೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ. ಕೋವಿಡ್ ಸೋಂಕಿನಿಂದ ತಂದೆ-ತಾಯಿಯರನ್ನು ಕಳೆದುಕೊಂಡು ಅನಾಥರಾದ ಹದಿನೆಂಟು ವರ್ಷ ವಯಸ್ಸಿನೊಳಗಿನ ಮಕ್ಕಳಿಗೆ ಐದು ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮಾ ಸುರಕ್ಷೆಯನ್ನು ಆಯುಷ್ಮಾನ್ ಭಾರತ ಯೋಜನೆಯಡಿ ಕೇಂದ್ರ ಸರ್ಕಾರ ನೀಡಲಿದೆ.

ಇದಕ್ಕಾಗಿ ವಿಮಾಕಂತನ್ನು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ತುರ್ತು ಸ್ಥಿತಿಯ ನಾಗರಿಕ ನೆರವು ಮತ್ತು ಪರಿಹಾರ ನಿಧಿ (ಪಿಎಂ-ಕೇರ್ಸ್‌)ಯಿಂದ ಪಾವತಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. ಭಾರತವನ್ನು ಸ್ವಾವಲಂಬಿಯಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡ ಕ್ರಮಗಳಿಗೆ ಸಂಬಂಧಿಸಿದ ಸರ್ಕಾರಿ ವೆಬ್‌ಸೈಟ್‌ನ ಲಿಂಕ್ ಕೂಡಾ ಪ್ರಕಟಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: