
ಕರ್ನಾಟಕಪ್ರಮುಖ ಸುದ್ದಿಮೈಸೂರು
ಸುತ್ತೂರು ಶ್ರೀಗಳನ್ನು ಭೇಟಿಯಾದ ಸಚಿವ ಜೆ.ಸಿ.ಮಾಧುಸ್ವಾಮಿ
ಮೈಸೂರು,ಆ.5:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಜೆ.ಸಿ.ಮಾಧುಸ್ವಾಮಿ ಅವರಿಂದು ಚಾಮುಂಡಿಬೆಟ್ಟದಲ್ಲಿರುವ ಶ್ರೀ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು.
ಚಾಮುಂಡಿಬೆಟ್ಟ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಚಿವರು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಕುಟುಂಬ ಸಮೇತರಾಗಿ ಆಗಮಿಸಿದ ಸಚಿವರು ನಿನ್ನೆಯಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದರು. (ಕೆ.ಎಸ್,ಎಸ್.ಎಚ್)