ದೇಶಪ್ರಮುಖ ಸುದ್ದಿ

ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್ ಬಿಐ

ನವದೆಹಲಿ,ಆ.6-ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಹಣಕಾಸು ನೀತಿಯನ್ನು ಪ್ರಕಟಿಸಿದ್ದು, ರೆಪೊ (ಬಡ್ಡಿ) ದರವನ್ನು ಯಥಾಸ್ಥಿತಿ ಮುಂದುವರಿಸಲಾಗಿದೆ.

ಇದರೊಂದಿಗೆ ಆರ್‌ಬಿಐ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಸತತ ಏಳು ಬಾರಿ ಬಡ್ಡಿ ದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಂಡಂತಾಗಿದೆ.

ಆರ್  ಬಿಐ ಗರ್ವನರ್ ಇಂದು ಹಣಕಾಸು ನೀತಿಯನ್ನು ಪ್ರಕಟಿಸಿದ್ದು, ಈಗಿರುವ ಶೇ. 3.35ರ ರಿವರ್ಸ್ ರೆಪೊ ದರವನ್ನೂ ಹಾಗೆಯೇ ಮುಂದುವರಿಸಲಾಗಿದೆ ಎಂದು ಘೋಷಿಸಿದರು. ಈ ಹಿಂದೆ 2020ರ ಮೇ 22ರಂದು ಆರ್‌ಬಿಐ ರೆಪೊ ದರದಲ್ಲಿ ಕಡಿತ ಮಾಡಿತ್ತು.

ಆರ್ಥಿಕ ಬೆಳವಣಿಗೆಗೆ ಬೆಂಬಲ ನೀಡುವ ಮತ್ತು ಹಣದುಬ್ಬರ ಪ್ರಮಾಣವನ್ನು ಮಿತಿಯಲ್ಲಿ ಇರಿಸುವ ಸಲುವಾಗಿ ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ಹಣಕಾಸು ನೀತಿ ಸಮಿತಿಯು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದೆ ಎಂದು ದಾಸ್ ತಿಳಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: