ದೇಶಪ್ರಮುಖ ಸುದ್ದಿ

     ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ ನಲ್ಲಿ   ಭಯೋತ್ಪಾದಕನ ಹತ್ಯೆ : ಮುಂದುವರಿದ ಭದ್ರತಾ ಪಡೆಗಳ ಕಾರ್ಯಾಚರಣೆ  

ದೇಶ(ಜಮ್ಮು)ಆ.7:- ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನ ಮೋಚ್ವಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ  ಓರ್ವ ಭಯೋತ್ಪಾದಕನನ್ನು ಹತ್ಯೆಗೈಯ್ಯಲಾಗಿದೆ.

ಒಂದು ಎಕೆ -47 ರೈಫಲ್ ಮತ್ತು ಒಂದು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳ ಕಾರ್ಯಾಚರಣೆ ಕಣಿವೆಯಲ್ಲಿ ನಡೆಯುತ್ತಿದೆ.

ಗುಪ್ತಚರ ಆಧಾರದ ಮೇಲೆ  ಮೋಚ್ವಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಆ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರು ಇದ್ದಕ್ಕಿದ್ದಂತೆ ಗುಂಡು ಹಾರಿಸಲು ಆರಂಭಿಸಿದರು. ಇದರ ನಂತರ, ಭದ್ರತಾ ಪಡೆಗಳು ಕೂಡ ಪ್ರತಿಯಾಗಿ ಗುಂಡು ಹಾರಿಸಿದರು.   ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು, ಓರ್ವ ಭಯೋತ್ಪಾದಕ ಹತನಾಗಿದ್ದಾನೆ.  (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: