ಕ್ರೀಡೆದೇಶಪ್ರಮುಖ ಸುದ್ದಿ

ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಜರಂಗ್ ಪುನಿಯಾ ಜೊತೆ ಮಾತನಾಡಿದ ಪಿಎಂ ಮೋದಿ : ಪ್ರತಿಯೊಬ್ಬ ಭಾರತೀಯರು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಾರೆ

ದೇಶ(ನವದೆಹಲಿ)ಆ.7:- ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ನಡೆದ ಕುಸ್ತಿಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಪ್ರಶಸ್ತಿ ತಂದುಕೊಟ್ಟ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರಪತಿ, ಪ್ರಧಾನಿ, ಗೃಹ ಸಚಿವರು ಸೇರಿದಂತೆ ಎಲ್ಲ ಗಣ್ಯರು ಅಭಿನಂದಿಸಿದ್ದಾರೆ.
ಕಜಕಿಸ್ತಾನದ ಕುಸ್ತಿಪಟು ದೌಲತ್ ನಿಯಾಜ್‌ಬೆಕೋವ್ ವಿರುದ್ಧ ಭಜರಂಗ್ ಶನಿವಾರ 8 ಕೆಜಿ ಗೆಲುವು ಸಾಧಿಸಿದ ನಂತರ 65 ಕೆಜಿ ತೂಕ ವಿಭಾಗದಲ್ಲಿ ಪದಕ ಗೆದ್ದರು. ಪ್ರಧಾನಿ ಮೋದಿ ಭಜರಂಗ್ ಪುನಿಯಾ ಅವರೊಂದಿಗೆ ಮಾತನಾಡಿದ್ದು, ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ. ಇಂದು ಪ್ರತಿಯೊಬ್ಬ ಭಾರತೀಯರು ಅವರ ಬಗ್ಗೆ ಹೆಮ್ಮೆಪಡುತ್ತಾರೆ ಎಂದು ಹೇಳಿದ್ದಾರೆ.
ಪಿಎಂ ನರೇಂದ್ರ ಮೋದಿ ಕುಸ್ತಿಪಟು ಬಜರಂಗ್ ಪುನಿಯಾ ಅವರೊಂದಿಗೆ ಮಾತನಾಡಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಭಿನಂದಿಸಿದರು. ಅವರು ಬಜರಂಗ್ ಅವರ ದೃಢನಿರ್ಧಾರ ಮತ್ತು ಶ್ರಮವನ್ನು ಶ್ಲಾಘಿಸಿದರು. ಇದು ಈ ಸಾಧನೆಗೆ ಕಾರಣವಾಗಿದೆ. ಪ್ರತಿಯೊಬ್ಬ ಭಾರತೀಯನೂ ಬಜರಂಗ್ ಸಾಧನೆಯ ಬಗ್ಗೆ ಹೆಮ್ಮೆಪಡುತ್ತಾನೆ ಎಂದು ಮೋದಿ ಹೇಳಿದರು. ಇದಕ್ಕೂ ಮುನ್ನ ಅವರು ಟ್ವೀಟ್ ಮಾಡಿದ್ದಾದ್ದು “ಟೋಕಿಯೊ 2020 ರಿಂದ ಒಳ್ಳೆಯ ಸುದ್ದಿ,ಬಜರಂಗ್ ಪುನಿಯಾ ಅದ್ಭುತವಾಗಿ ಹೋರಾಡಿದ್ದಾರೆ. ನಿಮ್ಮ ಸಾಧನೆಗೆ ಅಭಿನಂದನೆಗಳು, ನಿಮ್ಮ ಮೇಲೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಮತ್ತು ಸಂತೋಷಪಡುತ್ತಾನೆ” ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: