ದೇಶಪ್ರಮುಖ ಸುದ್ದಿ

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಕಂತು ಬಿಡುಗಡೆ ಮಾಡಲಿರುವ ಪಿಎಂ ಮೋದಿ

ದೇಶ(ನವದೆಹಲಿ)ಆ.9:-  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12.30ಕ್ಕೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ (ಪಿಎಂ ಕಿಸಾನ್) ಕಂತಿನ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.

19,500 ಕೋಟಿ ರೂ. ಗೂ ಹೆಚ್ಚಿನ ಮೊತ್ತವು 9.75 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಲಿದೆ. ಪ್ರಧಾನಿಯವರು ರೈತ ಫಲಾನುಭವಿಗಳ ಜತೆ ಸಂವಾದ ನಡೆಸಲಿದ್ದು, ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ  ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಯೋಜನೆಯಡಿ ಫಲಾನುಭವಿಗಳಿಗೆ ವರ್ಷಕ್ಕೆ  6,000ರೂ. ದೊರೆಯುತ್ತಿದೆ. ಮೂರು ಕಂತುಗಳಲ್ಲಿ  2,000 ರೂ. ಹಣ ಬಿಡುಗಡೆ ಮಾಡಲಾಗುತ್ತಿದೆ. ಇದು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ.

ಈ ಹಿಂದಿನ ಕಂತನ್ನು ಮೇ 14ರಂದು ಪ್ರಧಾನಿ ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದ್ದರು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: