ಮೈಸೂರು

ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದ ಶಾಸಕ ಸಾ.ರಾ.ಮಹೇಶ್

ಮೈಸೂರು,ಆ.10-ಶಾಸಕ ಸಾ.ರಾ.ಮಹೇಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದರು.

ಇಂದು ಬೆಳಿಗ್ಗೆ ಪತ್ನಿ ಅನಿತಾ ಅವರೊಂದಿಗೆ ಚಾಮುಂಡಿಬೆಟ್ಟಕ್ಕೆ ತೆರಳಿದ ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಗಳು, ನಗರಪಾಲಿಕೆ ಸದಸ್ಯರು, ಯುವ ಜನತಾದಳ ಅಧ್ಯಕ್ಷರು, ಉಪಾಧ್ಯಕ್ಷರು, ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

 

Leave a Reply

comments

Related Articles

error: