ದೇಶಪ್ರಮುಖ ಸುದ್ದಿ

ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರ ತಳಿಗೆ ಮುಂಬೈನಲ್ಲಿ ಮೊದಲ ಸಾವು

ಮುಂಬೈ,ಆ.13-ಕೊರೊನಾ ವೈರಸ್‌ನ ಡೆಲ್ಟಾ ಪ್ಲಸ್ ರೂಪಾಂತರ ತಳಿಯ ಸೋಕಿನಿಂದ ಮುಂಬೈನಲ್ಲಿ ಮೊದಲ ಸಾವು ಸಂಭವಿಸಿದೆ. ಒಟ್ಟಾರೆಯಾಗಿ ಡೆಲ್ಟಾ ಪ್ಲಸ್ ತಳಿಯಿಂದ ಮಹಾರಾಷ್ಟ್ರದಲ್ಲಿ ವರದಿಯಾದ ಎರಡನೇ ಸಾವಿನ ಪ್ರಕರಣ ಇದಾಗಿದೆ.

ಜುಲೈ ತಿಂಗಳಲ್ಲಿ ಎರಡು ಡೋಸ್ ಲಸಿಕೆ ಹಾಕಿಸಿದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಮಹಿಳೆಯ ನಿಕಟ ಸಂಪರ್ಕದಲ್ಲಿದ್ದ ಆರು ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಈ ಪೈಕಿ ಇಬ್ಬರಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ದೃಢಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜುಲೈ 13ರಂದು ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಗೆ ಮೊದಲ ಸಾವಿನ ಪ್ರಕರಣ ವರದಿಯಾಗಿತ್ತು. 80 ವರ್ಷದ ಮಹಿಳೆ ಮೃತಪಟ್ಟಿದ್ದರು. ಈಗ ಪೂರ್ವ ಮುಂಬೈನಲ್ಲಿ ತೀವ್ರಾ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಜುಲೈ 27ರಂದು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: