ಕರ್ನಾಟಕಪ್ರಮುಖ ಸುದ್ದಿ

ಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ಧತೆ ವೀಕ್ಷಣೆ

ರಾಜ್ಯ(ಮಡಿಕೇರಿ) ಆ.14:- ನಗರದ ಕೋಟೆ ಆವರಣದಲ್ಲಿ ಆಗಸ್ಟ್, 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಪೂರ್ವ ತಯಾರಿ ಸಂಬಂಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ವೇದಿಕೆ ನಿರ್ಮಾಣ, ಅತಿಥಿಗಳು ಹಾಗೂ ಗಣ್ಯರು ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಕವಾಯತು ಸಿದ್ಧತೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಪೊಲೀಸ್, ಅರಣ್ಯ ಹಾಗೂ ಗೃಹ ರಕ್ಷಕ ದಳ ಇಲಾಖೆಯಿಂದ ನಡೆದ ಕವಾಯತು ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು. ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ಎಇಇ ಶಿವರಾಮ್, ಜಿ.ಪಂ.ಇಇ ಶ್ರೀಕಂಠಯ್ಯ, ಮೀಸಲು ಪೊಲೀಸ್ ಪಡೆಯ ಇನ್ಸ್‍ಪೆಕ್ಟರ್ ರಾಚಯ್ಯ, ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ಸ್ವಾತಂತ್ರ್ಯ ದಿನಾಚರಣೆ ಸಂಬಂಧ ತಮ್ಮ ವ್ಯಾಪ್ತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: