ಕರ್ನಾಟಕಪ್ರಮುಖ ಸುದ್ದಿಮೈಸೂರು

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಚಿವಾಕಾಂಕ್ಷಿ ಶಾಸಕ ರಾಮದಾಸ್

ಮೈಸೂರು/ಬೆಂಗಳೂರು,ಆ.14:-  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಚಿವ ಸ್ಥಾನ ಆಕಾಂಕ್ಷಿ ಎಸ್‌.ಎ.ರಾಮದಾಸ್‌  ಅವರು ಭೇಟಿಯಾಗಿದ್ದಾರೆ.

ಬೆಂಗಳೂರಿನ ಆರ್‌.ಟಿ. ನಗರದಲ್ಲಿರುವ ಬೊಮ್ಮಾಯಿ ನಿವಾಸಕ್ಕೆ  ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಶಾಸಕ ಎಸ್.ಎ.ರಾಮದಾಸ್ ಮುಚ್ಚಿದ ಲಕೋಟೆ ಕೊಟ್ಟು ಬಂದಿದ್ದಾರೆ.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಮದಾಸ್‌ ಅವರು, ಮುಚ್ಚಿದ ಲಕೋಟೆಯಲ್ಲಿ ನನ್ನ ಕೆಲಸದ ಅನುಭವಗಳ ಪಟ್ಟಿ ಇದೆ. ಸಮಯ ಇರುವಾಗ ಓದಿ ಎಂದು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ರಾಜ್ಯ ಹಾಗೂ ಪಕ್ಷದ ಹಿತದೃಷ್ಟಿಯಿಂದ ಕೆಲವು ವಿಚಾರ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಾನು ಇವತ್ತು‌ ಸಿಎಂ ಭೇಟಿ ಮಾಡಿದ್ದೇನೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಮೈಸೂರಿಗೆ ಬಂದಿದ್ದಾಗ ನಾನು ಅವರನ್ನು ಭೇಟಿ ಮಾಡಿರಲಿಲ್ಲ. ಯಾಕೆ ಭೇಟಿ ಮಾಡಿಲ್ಲ ಎಂಬುದಕ್ಕೆ ಪತ್ರದ ಮೂಲಕ ಕಾರಣ ಕೊಡುತ್ತೇನೆ ಎಂದಿದ್ದೆ. ಅದರಂತೆ ಇವತ್ತು ಸಿಎಂ ಭೇಟಿ ಮಾಡಿ ಸೀಲ್ಡ್ ಕವರ್ ಕೊಟ್ಟಿದ್ದೇನೆ ಎಂದು ರಾಮದಾಸ್‌ ಹೇಳಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: