ದೇಶಪ್ರಮುಖ ಸುದ್ದಿ

ಸ್ವಾತಂತ್ರ್ಯ ದಿನಾಚರಣೆ: ದಾಳಿಗೆ ಸಂಚು ರೂಪಿಸಿದ್ದ 4 ಜೆಇಎಂ ಉಗ್ರರ ಬಂಧನ; ತಪ್ಪಿದ ವಿಧ್ವಂಸಕ ಕೃತ್ಯ

ನವದೆಹಲಿ,ಆ.14-ಸ್ವಾತಂತ್ರ್ಯ ದಿನಾಚರಣೆ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ಇದರಿಂದ ದೊಡ್ಡ ವಿಧ್ವಂಸಕ ಕೃತ್ಯವೊಂದು ತಪ್ಪಿದಂತಾಗಿದೆ. ಕಾಶ್ಮೀರದಲ್ಲಿದ್ದ ಜೆಇಎಂ ಅಡಗುತಾಣಗಳ ಮೇಲೆ ಇಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಡ್ರೋಣ್ ಮೂಲಕ ಕಾಶ್ಮೀರದಲ್ಲಿರುವ ಉಗ್ರರಿಗೆ ರವಾನಿಸುತ್ತಿದ್ದರು ಎಂದು ತಿಳಿದುಬಂದಿದೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನು ಕರಾಳ ದಿನವನ್ನಾಗಿ ಮಾಡುವ ಉದ್ದೇಶ ಹೊಂದಿದ್ದ ಈ ಬಂಧಿತ ಉಗ್ರರು, ಇದಕ್ಕಾಗಿ ಜಮ್ಮುವಿನಲ್ಲಿ ವಾಹನದಲ್ಲಿ ಐಇಡಿ ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದರು ಎಂದು ಜಮ್ಮುವಿನ ಐಜಿಪಿ ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: