ಮೈಸೂರು

ಮಹಾಜನ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಮೈಸೂರು,ಆ.15:- ಮಹಾಜನ ವಿದ್ಯಾಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಮತ್ತು ಅಂಗಸಂಸ್ಥೆಗಳು ಆಚರಿಸಿದವು.
ಮಹಾಜನ ವಿದ್ಯಾಸಂಸ್ಥೆಯ ಗೌ. ಕಾರ್ಯದರ್ಶಿಗಳಾದ ಡಾ. ಟಿ. ವಿಜಯಲಕ್ಷ್ಮೀ ಮುರಳೀಧರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ಮಾಡಿದರು. ಮುಖ್ಯ ಅತಿಥಿಗಳಾಗಿ ಪೂಜಾ ಭಾಗವತ್ ಸ್ಮಾರಕ ಮಹಾಜನ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ. ಸಿ.ಕೆ. ರೇಣುಕಾರ್ಯ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಾಜನ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರೊ. ಪಿ. ಸರೋಜಮ್ಮ, ಮಹಾಜನ ಕಾಲೇಜಿನ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ. ಎಸ್.ಆರ್. ರಮೇಶ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ ಅವರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: