ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 1,431 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ರಾಜ್ಯ( ಬೆಂಗಳೂರು)ಆ.16:- ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು 1,431 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 21 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,979ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ 305 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,32,902ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 1,611 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,69,962ಕ್ಕೆ ಏರಿಕೆಯಾಗಿದೆ. 22,497 ಸಕ್ರಿಯ ಪ್ರಕರಣಗಳಿವೆ.

ರಾಜ್ಯಾದ್ಯಂತ 1,52,767 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,431 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.93ಕ್ಕೆ ಇಳಿದಿದೆ.

Leave a Reply

comments

Related Articles

error: