ಕರ್ನಾಟಕಪ್ರಮುಖ ಸುದ್ದಿ

ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಪಡಿತರ ವಿತರಣಾ ವ್ಯವಸ್ಥೆ ಪರಿಶೀಲಿಸಿದ ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

ರಾಜ್ಯ(ಮಂಡ್ಯ),ಆ.16:-  ಮಂಡ್ಯ ಜಿಲ್ಲೆಯ ನಿಡಘಟ್ಟದ ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿದ ಕೇಂದ್ರದ ನೂತನ ಕೃಷಿ ಮತ್ತು ರೈತರ ಅಭಿವೃದ್ಧಿ  ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು  ಅಲ್ಲಿನ ಪಡಿತರ ವಿತರಣಾ ವ್ಯವಸ್ಥೆ, ಗುಣಮಟ್ಟವನ್ನು ಪರಿಶೀಲಿಸಿದರು.

ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿಯಲ್ಲಿಂದು ಇಂದು ಬೆಳ್ಳಂಬೆಳಿಗ್ಗೆ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಂಡ್ಯಕ್ಕೆ  ಆಗಮಿಸಿದರು. ಮಂಡ್ಯದ ಗಡಿಭಾಗ ನಿಡಘಟ್ಟ ಬಳಿ ಸಚಿವರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಶೋಭಾ ಅವರು ರುದ್ರಾಕ್ಷಿಪುರ ಗ್ರಾಮದ ನ್ಯಾಯಬೆಲೆ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ   ನಾರಾಯಣ ಗೌಡ, ಶಾಸಕರಾದ ನಾಗೇಂದ್ರ, ಜಿಲ್ಲಾ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)ರಾಜ್ಯ(ಮಂಡ್ಯ),ಆ.16:- ಮಂಡ್ಯ ಜಿಲ್ಲೆಯ ನಿಡಘಟ್ಟದ ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿದ ಕೇಂದ್ರದ ನೂತನ ಕೃಷಿ ಮತ್ತು ರೈತರ ಅಭಿವೃದ್ಧಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಅಲ್ಲಿನ ಪಡಿತರ ವಿತರಣಾ ವ್ಯವಸ್ಥೆ, ಗುಣಮಟ್ಟವನ್ನು ಪರಿಶೀಲಿಸಿದರು.
ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿಯಲ್ಲಿಂದು ಇಂದು ಬೆಳ್ಳಂಬೆಳಿಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಂಡ್ಯಕ್ಕೆ ಆಗಮಿಸಿದರು. ಮಂಡ್ಯದ ಗಡಿಭಾಗ ನಿಡಘಟ್ಟ ಬಳಿ ಸಚಿವರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಶೋಭಾ ಅವರು ರುದ್ರಾಕ್ಷಿಪುರ ಗ್ರಾಮದ ನ್ಯಾಯಬೆಲೆ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ, ಶಾಸಕರಾದ ನಾಗೇಂದ್ರ, ಜಿಲ್ಲಾ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: