ಮೈಸೂರು

ಆ.19ರಂದು ವಿವಿಧ ಮುಖಂಡರ ಕಾಂಗ್ರೆಸ್ ಸೇರ್ಪಡೆ

ಮೈಸೂರು,ಆ.17:-  ತಾವೂ ಭ್ರಷ್ಟರಾಗಿ ಮತದಾರರನ್ನೂ ಭ್ರಷ್ಟರಾಗಿಸುತ್ತಿರುವ ಭಾರತೀಯ ಜನತಾ ಪಕ್ಷದ ವರ್ತನೆಗೆ ಬೇಸತ್ತು ಪಕ್ಷವನ್ನು ತೊರೆದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರುತ್ತಿರುವುದಾಗಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಮಲ್ಲೇಶ್ ತಿಳಿಸಿದರು.

ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆ.19ರಂದು ಮಧ್ಯಾಹ್ನ 12.30ಕ್ಕೆ ಮೈಸೂರು ಕಾಂಗ್ರೆಸ್ ಕಛೇರಿಯಲ್ಲಿ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರುವುದಾಗಿ ತಿಳಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧೃವನಾರಾಯಣ್, ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯಕುಮಾರ್ ಮತ್ತು ರಾಜ್ಯ, ಜಿಲ್ಲಾ ಮತ್ತು ತಾಲೂಕು ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮೆಚ್ಚಿ ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದರು.

ಹೆಚ್ ಡಿ ಕೋಟೆ ತಾಲೂಕು ಪಂಚಾಯತ್ ಮಾಜಿ ಸದಸ್ಯ ಮಲ್ಲಿಕಾರ್ಜುನ, ಹಾಲಿ ಗ್ರಾ.ಪಂ ಸದಸ್ಯ ಕುಮಾರ್ ಬರಗಿ, ಹಂಚಿಪುರ ಗ್ರಾ.ಪಂ .ಮಾಜಿ ಅಧ್ಯಕ್ಷ ಪರಶಿವ, ಮಾದಪುರ ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದ್ರಶೇಖರ್, ಧಾರವಾಹಿ ನಿರ್ದೇಶಕ ಮೈಸೂರು ಮಂಜು, ವಕೀಲ ಲೋಕೇಶ್ ಗೌಡ, ವಿಶ್ವಕರ್ಮ ಜನಾಂಗದ ಮುಖಂಡ ಸಿದ್ದಪ್ಪಾಜಿ, ಬಿಜೆಪಿ ಮುಖಂಡ ಬೀರೆಗೌಡ ಮೊಳೆಯೂರು, ಪ್ರಮುಖ ಸಮಾಜದ ಮುಖಂಡರು ಇವರು ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: