ಕರ್ನಾಟಕಪ್ರಮುಖ ಸುದ್ದಿ

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ರಾಜ್ಯ( ದಾವಣಗೆರೆ),ಆ.18:- ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಬಿಡುಗಡೆಯಾಗಿರುವ ಒಟ್ಟು ರೂ.8 ಲಕ್ಷ ಮೌಲ್ಯದ ಯಂತ್ರಚಾಲಿತ ತ್ರಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ಗಳನ್ನು ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ ಆವರಣದಲ್ಲಿ 8 ಜನ ಫಲಾನುಭವಿಗಳಿಗೆ ಹಾಗೂ ಇಲಾಖೆಯಡಿ ಆಯ್ಕೆಯಾದ 5 ಫಲಾನುಭವಿಗಳು ಸೇರಿ ಒಟ್ಟು 13 ಜನ ತೀವ್ರತರನಾದ ವಿಕಲಚೇತನರಿಗೆ ಶಾಸಕ ಪ್ರೊ. ಎನ್. ಲಿಂಗಣ್ಣ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ.ವಿ.ಮಠದ ಹಾಗೂ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ ಅಧೀಕ್ಷಕ ಡಾ. ಕೆ.ಕೆ. ಪ್ರಕಾಶ್ ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: