ಮೈಸೂರು

ಪಾದಚಾರಿ ಮಾರ್ಗ ಅಡೆತಡೆ ತೆರವು : ಸಂಚಾರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಮೈಸೂರು,ಆ.17:- ನಗರದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರಸ್ಥರು ಪಾದಚಾರಿ ಮಾರ್ಗದಲ್ಲಿ ತಮ್ಮ ವ್ಯಾಪಾರದ ಸಾಮಾಗ್ರಿಗಳನ್ನು ಇಟ್ಟು ವ್ಯಾಪಾರ ಮಾಡುತ್ತಿದ್ದು, ಇದರಿಂದ ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಮೈಸೂರು ನಗರ ಸಂಚಾರ ಪೊಲೀಸರು ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿರುತ್ತಾರೆ.
17.08.2021 ರಂದು ಕೆ.ಆರ್. ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಮಾನುಜ ರಸ್ತೆ. ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೂರು ರಸ್ತೆ. ವಿ.ವಿ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲಂ ಮುಖ್ಯ ರಸ್ತೆ ಇಲ್ಲಿ ಫುಟ್‍ ಪಾತ್ ತೆರವು ಕಾರ್ಯದ ಸಮಯದಲ್ಲಿ ಫುಟ್‍ ಪಾತ್ ಆವರಿಸಿಕೊಂಡಿದ್ದ 10 ಜನರಿಗೆ ನೋಟೀಸ್‍ಗಳನ್ನು ನೀಡಲಾಗಿದೆ.
ಫುಟ್‍ ಪಾತ್ ತೆರವುಗೊಳಿಸುವ ಈ ಕಾರ್ಯಾಚರಣೆಯನ್ನು ನಗರದ ಸಂಚಾರ ವಿಭಾಗದ ಡಿ.ಸಿ.ಪಿ ಗೀತ ಪ್ರಸನ್ನರವರು ಹಾಗೂ ಸಂಚಾರ ವಿಭಾಗದ ಎ.ಸಿ.ಪಿ ಎಸ್.ಇ.ಗಂಗಾಧರಸ್ವಾಮಿ ರವರ ಮಾರ್ಗದರ್ಶನದಲ್ಲಿ ಸಂಚಾರ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರುಗಳು, ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾಡಿರುತ್ತಾರೆ. ಫುಟ್‍ ಪಾತ್ ತೆರವುಗೊಳಿಸುವ ಈ ಕಾರ್ಯಾಚರಣೆಯು ಇದೇ ರೀತಿ ಮುಂದಿನ ದಿನಗಳಲ್ಲಿಯೂ ಮುಂದುವರೆಯಲಿದ್ದು, ಫುಟ್‍ಪಾತ್ ಅತಿಕ್ರಮಣ ಮಾಡುವ ವ್ಯಾಪಾರಸ್ಥರ ವಿರುದ್ದ ಕಾನೂನಿನ ರೀತ್ಯಾ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಮೈಸೂರು ನಗರದ ಪೊಲೀಸ್ ಆಯುಕ್ತರಾದ ಡಾ.
ಚಂದ್ರಗುಪ್ತ ತಿಳಿಸಿರುತ್ತಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: