Uncategorized

ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಪತಿ ಶಶಿ ತರೂರ್ ನಿರ್ಷೋಷಿ; ದೆಹಲಿ ಕೋರ್ಟ್

ನವದೆಹಲಿ,ಆ.18-ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆರೋಪ ಮುಕ್ತಗೊಳಿಸಿ ದೆಹಲಿ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ದೆಹಲಿಯ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿ ಶಶಿ ತರೂರ್ ಅವರನ್ನು ಆರೋಪ ಮುಕ್ತಗೊಳಿಸಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ 2014ರ ಜನವರಿಯಲ್ಲಿ ದೆಹಲಿಯ ಫೈವ್ ಸ್ಟಾರ್ ಹೊಟೇಲ್ ನ ಕೋಣೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದರು. ಸುನಂದಾ ಪುಷ್ಕರ್ ಅವರ ಮೃತದೇಹ ಹೊಟೇಲ್ ರೂಂನಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ತರೂರ್ ಅವರಿಗೆ 2018ರ ಜುಲೈ 5 ರಂದು ಜಾಮೀನು ಮಂಜೂರಾಗಿದೆ. ಬಳಿಕ ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಶಶಿ ತರೂರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: