ಕರ್ನಾಟಕ

ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ: ಉಷಾಗೆ ಚಿನ್ನ, ಬೆಳ್ಳಿ ಪದಕ

ಸೂಲಿಬೆಲೆ,ಆ.19-ಪಂಜಾಬಿನ ಪಾಟಿಯಾಲದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಸೀನಿಯರ್ ಮತ್ತು ಜೂನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಎಸ್.ಆರ್.ಉಷಾ ಜೂನಿಯರ್ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ್ದಾರೆ.

ಉಷಾ ಅವರು ಜೂನಿಯರ್ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಸೀನಿಯರ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಅವರ ಸಾಧನೆಯನ್ನು ಹೋಬಳಿಯ ಕ್ರೀಡಾಪಟುಗಳು, ನಾಗರಿಕರು ಅಭಿನಂದಿಸಿದ್ದಾರೆ.

ಸೂಲಿಬೆಲೆಯ ರಮೇಶ್ ಮತ್ತು ನಿರ್ಮಲಾ ದಂಪತಿಯ ಪುತ್ರಿಯಾದ ಅವರು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ಬಿ.ಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.  (ಎಂ.ಎನ್)

Leave a Reply

comments

Related Articles

error: