
ಕರ್ನಾಟಕಪ್ರಮುಖ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ
ರಾಜ್ಯ(ಮಡಿಕೇರಿ )ಆ.21:-ನಗರದ ಐಟಿಐ ಕಾಲೇಜು ಹಿಂಭಾಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕಾರದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ ಶಾಸಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ 2 ಕೋಟಿ ರೂ ಬಳಸಲಾಗುತ್ತಿದೆ ಸುಸಜ್ಜಿತ ಕಾಲೇಜು ಕಟ್ಟಡ ನಿರ್ಮಾಣವಾಗಲಿದೆ ಎಂದು ಅವರು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 400 ಮಂದಿ ವ್ಯಾಸಾಂಗ ಮಾಡುತ್ತಿದ್ದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಹಳ ಹಿಂದೆಯೆ ಕಟ್ಟಡ ನಿರ್ಮಾಣ ಮಾಡಬೇಕಾಗಿತ್ತು, ಸೂಕ್ತ ಜಾಗ ದೊರೆಯದಿರುವುದರಿಂದ ವಿಳಂಭವಾಯಿತು. ಸದ್ಯ ವರಲಕ್ಷ್ಮಿ ಹಬ್ಬದಂದು ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.
ಪ್ರಾಂಶುಪಾಲರಾದ ಚಿತ್ರಾ, ಪ್ರಾಧ್ಯಾಪಕರಾದ ಕೆ.ಸಿ.ದಯಾನಂದ, ಮುತ್ತಮ್ಮ, ಕುಸುಮ, ಲೋಕೋಪಯೋಗಿ ಇಲಾಖೆ ಎಇಇ ಶಿವರಾಂ, ಎ.ಇ.ದೇವರಾಜು ಇತರರು ಇದ್ದರು.(ಜಿ.ಕೆ,ಎಸ್.ಎಚ್)