ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 1,453 ಕೊರೊನಾ ವೈರಸ್ ಸೋಂಕು ಪತ್ತೆ

ರಾಜ್ಯ(ಬೆಂಗಳೂರು),ಆ.21: – ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಚೇತರಿಕೆ ಪ್ರಕರಣವನ್ನು ಹಿಂದಿಕ್ಕಿದೆ. ಕೆಲ ದಿನಗಳಿಂದ ದಿನದ ಪ್ರಕರಣಗಳಿಗಿಂತ ಚೇತರಿಕೆ ಪ್ರಕರಣಗಳ ಸಂಖ್ಯೆ ಹೆಚ್ಚಿರುತ್ತಿತ್ತು. ಆದರೆ 1,408 ಮಂದಿ ಡಿಸ್ಚಾರ್ಜ್ ಆಗಿದ್ದರೆ ಹೊಸದಾಗಿ 1,453 ಪ್ರಕರಣ ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ 1,453 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,33,192ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ ಮಹಾಮಾರಿಗೆ 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,105ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ 352 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,34,509ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 1 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 1,408 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,77,785ಕ್ಕೆ ಏರಿಕೆಯಾಗಿದೆ. 21,161 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ 1,73,000 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,453 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.83ಕ್ಕೆ ಇಳಿದಿದೆ.

Leave a Reply

comments

Related Articles

error: