ದೇಶಪ್ರಮುಖ ಸುದ್ದಿ

ಕೊರೊನಾ: ದೇಶದಲ್ಲಿ ನಿನ್ನೆ 25,072 ಪ್ರಕರಣ ಪತ್ತೆ; 389 ಮಂದಿ ಸಾವು

ನವದೆಹಲಿ,ಆ.23-ದೇಶದಲ್ಲಿ ನಿನ್ನೆ 25,072 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,24,49,306ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,34,756ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,33,924ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 44,157 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,16,80,626ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ 12,95,160 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 50,75,51,399 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 58,25,49,595 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: